- Advertisement -
- Advertisement -



ಶ್ರೀನಗರ: ಪಹಲ್ಗಾಮ್ ದಾಳಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಬುಧವಾರ ಉಗ್ರರು ಪೊಲೀಸರ ತಂಡದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 35 ವರ್ಷದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.
ಈ ಗುಂಡಿನ ದಾಳಿಯು ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಮಧ್ಯಾಹ್ನ ಸುಮಾರು 12:30ಕ್ಕೆ ಸಂಭವಿಸಿದ್ದು, ದಾಳಿಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು.
ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ ಅವರು ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.
ಪ್ರಸ್ತುತ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು, ದಾಳಿ ನಡೆಸಿ ಪರಾರಿಯಾಗಿರುವ ಉಗ್ರರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
- Advertisement -








