Saturday, June 20, 2026
spot_imgspot_img
spot_imgspot_img

ಪತ್ನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನಲೆಯಲ್ಲಿ ಪತಿ ಆತ್ಮಹತ್ಯೆ!

- Advertisement -
- Advertisement -

ಶ್ರೀನಿವಾಸಪುರ: ಪಟ್ಟಣದ ಪ್ರಸಾದ್ ರಸ್ತೆಯ ನಿವಾಸಿ ಶ್ರೀನಿವಾಸ್ (55) ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀನಿವಾಸ್ ಪಟ್ಟಣದಲ್ಲಿ ಉಪ್ಪಿನ ವ್ಯಾಪಾರ ಮಾಡುತ್ತಿದ್ದರು. ಹೆಂಡತಿ ಹಾಗೂ ಮಗಳೊಂದಿಗೆ ಜೀವನ ನಡೆಸುತ್ತಿದ್ದರು. ಅವರ ಪತ್ನಿಗೆ ಜ್ವರ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಸಹೋದರ ಶ್ರೀರಾಮಪ್ಪ ನೀಡಿರುವ ದೂರಿನ ಮೇರೆಗೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಸಿ.ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

Related news

error: Content is protected !!