Thursday, April 25, 2024
spot_imgspot_img
spot_imgspot_img

ಕೋವಿಡ್ ಹೆಸರಲ್ಲಿ ಸರ್ಕಾರದಿಂದ ಬ್ರಹ್ಮಾಂಡ ಭ್ರಷ್ಟಾಚಾರ: ಸಿದ್ದರಾಮಯ್ಯ..

- Advertisement -G L Acharya panikkar
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಬೆಂಗಳೂರು: ಕೋವಿಡ್-19 ಹೆಸರಿನಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹಿಂದೆ ಆರೋಪಮಾಡಿದ್ದಕ್ಕಿಂತಲೂ ಭಾರೀ ದೊಡ್ಡ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿದರು.

ನಾವು ವಿವಿಧ ಮೂಲಗಳಿಂದ ಕಲೆ ಹಾಕಿದ ಮಾಹಿತಿ ಪ್ರಕಾರ, ಬೇರೆ ಬೇರೆ ಇಲಾಖೆ ಕೊರೊನಾಗಾಗಿ ಒಟ್ಟು 4,157 ಕೋಟಿ ರೂ. ಖರ್ಚು ಮಾಡಿದೆ. ಆದರೆ ಶ್ರೀರಾಮುಲು ಅವರು 324 ಕೋಟಿ ರೂ. ಖರ್ಚಾಗಿದೆ ಎನ್ನತ್ತಾರೆ. ಇನ್ನು ಡಿಸಿಎಂ ಅಶ್ವಥ್ ನಾರಾಯಣ್ ಬೇರೆಯದ್ದೇ ಉತ್ತರ ಕೊಡುತ್ತಾರೆ. ಇಲ್ಲಿ ಸುಳ್ಳು ಹೇಳುತ್ತಿರುವುದು ಯಾರು ಎಂದು ಪ್ರಶ್ನಿಸಿದ್ರು.

ವೆಂಟಿಲೇಟರ್ ಖರೀದಿಯಲ್ಲೂ ಭಾರೀ ಲೂಟಿ ಆರೋಪ

ಇನ್ನು ವೆಂಟಿಲೇಟರ್ ಖರೀದಿಯಲ್ಲೂ ಭಾರೀ ಅವ್ಯವಹಾರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, 1 ವೆಂಟಿಲೇಟರ್ ಗೆ ಕೇಂದ್ರ ಸರ್ಕಾರ 4 ಲಕ್ಷ ರೂ.ನಂತೆ ಖರ್ಚು ಮಾಡಿದೆ. ತಮಿಳುನಾಡು 4.78 ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ 18 ಲಕ್ಷ ರೂ.ಹಣ ಕೊಟ್ಟು ವೆಂಟಿಲೇಟರ್ ಖರೀದಿ ಮಾಡಿದೆ ಎಂದು ದೂರಿದರು.

ಕೇಂದ್ರ ಸರ್ಕಾರ 2 ಸಾವಿರ ಕೋಟಿ ಹಣ ಖರ್ಚು ಮಾಡಿ 50 ಸಾವಿರ ವೆಂಟಿಲೇಟರ್ಸ್ ಖರೀದಿ ಮಾಡಿದೆ. ಒಂದು ವೆಂಟಿಲೇಟರ್ಗೆ 4 ಲಕ್ಷ ರೂನಂತೆ ಖರ್ಚು ಮಾಡಿದೆ. ಇದರ ಬಳಿಕ ಮತ್ತೊಂದು ಬಾರಿ 12.32 ಲಕ್ಷ ರೂನಂತೆ ಖರೀದಿ ಮಾಡಿದೆ. ಏಪ್ರಿಲ್ 23ರಂದು 18.23 ಲಕ್ಷದಂತೆ ವೆಂಟಿಲೇಟರ್ ಖರೀದಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿವರ ನೀಡಿದ್ರು.

ಪಿಪಿಇ ಕಿಟ್ ಖರೀದಿಯಲ್ಲೂ ಭ್ರಷ್ಟಾಚಾರ

ಪಿಪಿಇ ಕಿಟ್ ಖರೀದಿ ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ದಾಖಲೆ ನೀಡಿದ್ದಾರೆ. ಒಂದು ಪಿಪಿಇ ಕಿಟ್ಗೆ ಮಾರುಕಟ್ಟೆಯಲ್ಲಿ 330 ರೂ ಇದೆ. ಆದರೆ, ರಾಜ್ಯ ಸರ್ಕಾರ ಚೀನಾದ ಪಿಪಿಇ ಕಿಟ್ಗಳನ್ನ 2,117 ರೂ ಕೊಟ್ಟು ಖರೀದಿ ಮಾಡಿದೆ. ಇವೆಲ್ಲವೂ ಕಳಪೆ ಗುಣಮಟ್ಟದ್ದೆಂದು ವೈದ್ಯರೇ ಹೇಳಿದ್ದಾರೆ. ಸರ್ಕಾರ ದುಬಾರಿ ಬೆಲೆ ತೆತ್ತು ಕಳಪೆ ಪಿಪಿಇ ಕಿಟ್ ಖರೀದಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ರು.

ಹೈಕೋರ್ಟ್ ತನಿಖೆಮಾಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹ

ಇಷ್ಟೇ ಅಲ್ಲ, ಮಾಸ್ಕ್, ಥರ್ಮಲ್ ಸ್ಕ್ಯಾನಲ್, ಸ್ಯಾನಿಟೈಸರ್ ಖರೀದಿಯಲ್ಲೂ ಭಾರೀ ಅವ್ಯವಹಾರ ನಡೆದಿದೆ. ಹೀಗಾಗಿ ರಾಜ್ಯ ಸರ್ಕಾರ ನಡೆಸಿದ ಭ್ರಷ್ಟಾಚಾರವನ್ನು ಹೈಕೋರ್ಟ್ ತನಿಖೆ ಮಾಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

- Advertisement -

Related news

error: Content is protected !!