Monday, June 8, 2026
spot_imgspot_img
spot_imgspot_img

ಕಾರು ಹತ್ತುವ ವೇಳೆ ಕುಸಿದು ಬಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ..!!

- Advertisement -
- Advertisement -

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ ಕೂಡ್ಲಿಗಿಗೆ ತೆರಳಿದ್ದರು.

ಹೆಲಿಕಾಪ್ಟರ್‌‍ನಿಂದ ಇಳಿದ ಕೂಡಲೇ ಮೊಬೈಲ್​ನಲ್ಲಿ ಬ್ಯೂಸಿ ಆದ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂರಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ನೆರವಿಗೆ ಧಾವಿಸಿ ಕೈ ಹಿಡಿದು ಎತ್ತಿದ್ದಾರೆ. ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್​​ ಮಾಡಿದ ಸಿದ್ದರಾಮಯ್ಯನವರು ” ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ” ಎಂದು ಹೇಳಿದ್ದಾರೆ .

- Advertisement -

Related news

error: Content is protected !!