Thursday, July 3, 2025
spot_imgspot_img
spot_imgspot_img

ಸುರತ್ಕಲ್ ಟೋಲ್‌ಗೇಟ್ ಬಳಿ ನೈತಿಕ ಪೊಲೀಸ್ ಗಿರಿ; ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ ಎಂದು ಗುಡುಗಿದ ಸಿದ್ದು

- Advertisement -
- Advertisement -

ಸುರತ್ಕಲ್‌ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನ್ಯೂಸ್ ಒಂದರ ಫೋಟೋವನ್ನು ಟ್ವೀಟ್ ನಲ್ಲಿ ಜೋಡಿಸಿ ಮಂಗಳೂರಿನಲ್ಲ ತಾಲಿಬಾನ್ ಸರ್ಕಾರವಿದೆಯೇ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸುರತ್ಕಲ್: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿದ್ದ ಬೊಲೆರೋ ವಾಹನವನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನ!

ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಒಟ್ಟಾಗಿ ಹೋದರು ಎಂಬ ಕಾರಣಕ್ಕೆ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸನ್ಮಾನ್ಯ ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ ಗಳದ್ದಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

- Advertisement -

Related news

error: Content is protected !!