- Advertisement -
- Advertisement -
ಬೆಂಗಳೂರು: ಕೊರೊನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಗರದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಜತೆಗೆ ಅವರಿಗೆ ಮೂತ್ರಕೋಶದ ಸೋಂಕು ಇದೆ ಎಂದು ತಿಳಿದುಬಂದಿದೆ.
ಹೀಗಾಗಿ ಎರಡೆರಡು ಸಮಸ್ಯೆಗೆ ಡಾ.ಸುದರ್ಶನ್ ಬಲ್ಲಾಳ್ ತಂಡ ಚಿಕಿತ್ಸೆ ನೀಡುತ್ತದೆ. ಡಾ,ವಿಶ್ವನಾಥ್ ಅವರು, 2 ಸಮಸ್ಯೆಗೂ ಏಕಕಾಲಾದಲ್ಲಿ ಚಿಕಿತ್ಸೆ ನೀಡುತ್ತಾ ಸಿದ್ದರಾಮಯ್ಯ ಅವರ ಆರೋಗ್ಯ ಚೇತರಿಕೆಗೆ ಜಾಗ್ರತೆ ವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಜ್ವರ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಆ ಬಳಿಕ ಸಿದ್ದರಾಮಯ್ಯ ಅವರಿಗೆ ರಕ್ತ ಪರೀಕ್ಷೆ, ಇಸಿಜಿ ಪರೀಕ್ಷೆ ನಡೆಸಲಾಗಿತ್ತು.
- Advertisement -