ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಟ್ವೀಟ್ ಮಾಡಿದ ಸಿದ್ದರಾಮಯ್ಯ, ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
— Siddaramaiah (@siddaramaiah) August 4, 2020
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
ಇನ್ನು ಸಿದ್ದರಾಮಯ್ಯ ಪುತ್ರ ಶಾಸಕ ಡಾ.ಯತೀಂದ್ರ ಕೂಡ ಟ್ವೀಟ್ ಮಾಡಿದ್ದು, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆ್ಯಂಟಿಗೇನ್ ಮಾಡಲಾಗಿದ್ದು, ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.