Thursday, July 30, 2026
spot_imgspot_img
spot_imgspot_img

ಏಪ್ರಿಲ್ ನಂತರ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುವುದು ನಿಶ್ಚಿತ : ಸಿದ್ದರಾಮಯ್ಯ

- Advertisement -
- Advertisement -

ಮೈಸೂರು: ನನಗೆ ಆರ್.ಎಸ್.ಎಸ್. ಮೂಲಗಳಿಂದ ದೊರೆತ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರನ್ನು ಏಪ್ರಿಲ್ ನಂತರ ಅಧಿಕಾರದಿಂದ ಕೆಳಗಿಳಿಸುವುದು ನಿಶ್ಚಿತ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.


ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಧಿಕಾರಾವಧಿಯನ್ನು ಪೂರೈಸುತ್ತಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಅವರು ಬಹಿರಂಗವಾಗಿ ಈ ರೀತಿಯ ಹೇಳಿಕೆ ನೀಡುವುದು ಸಹಜ. ಇನ್ನೇನು ಯಡಿಯೂರಪ್ಪ ಅವರನ್ನು ತೆಗೆಯುತ್ತೇನೆಂದು ಬಹಿರಂಗವಾಗಿ ಹೇಳೋಕೆ ಆಗುತ್ತಾ? ಯಾವುದೇ ಪಕ್ಷದ ಹೈಕಮಾಂಡ್ ಆದರೂ ಸಹ ಇಂಥ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡುವುದಿಲ್ಲ ಎಂದರು.

ಹೈಕಮಾಂಡ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ನಿರ್ಧಾರ ಕೈಗೊಂಡರೆ ಸರ್ಕಾರ ನಡೆಯುತ್ತಾ..? ಯಡಿಯೂರಪ್ಪ ಅವರಿಗೆ ಕೆಲಸ ಮಾಡೋಕೆ ಆಗುತ್ತಾ ಎಂದು ಪ್ರಶ್ನಿಸಿದ
ನನಗೆ ಆರ್‌ಎಸ್ಎಸ್ ಮೂಲಗಳಿಂದ ಮಾಹಿತಿ ಬಂದಿದೆ. ಯಾವುದೇ ಕಾರಣಕ್ಕೂ ಯಡಿಯೂರಪ್ಪ ಏಪ್ರಿಲ್ ನಂತರ ಮುಖ್ಯಮಂತ್ರಿಯಾಗಿ ಮುಂದುವರೆಯುವುದಿಲ್ಲ ಎಂದು ಹೇಳಿದರು.

- Advertisement -

Related news

error: Content is protected !!