- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೊರೊನಾ ವಿಚಾರದಲ್ಲಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ವಿರುದ್ಧ ಕಾನೂನು ಸಮರಕ್ಕೆ ಬಿಜೆಪಿ ಮುಂದಾಗಿದೆ. ಇಂದು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ್ ಹಾಗೂ ಬಿಜೆಪಿ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಬಿಎಸ್ ವೈ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದೆ. ಇದಕ್ಕೆ ಕಾಂಗ್ರೆಸ್ ಗೆ ಹೊಟ್ಟೆ ಉರಿಯುತ್ತಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ ಎಂದು ದೂರಿದರು.
ಇದೇ ವೇಳೆ ಲೀಗಲ್ ನೋಟಿಸ್ ಪ್ರದರ್ಶಿಸಿದ ಎನ್.ರವಿಕುಮಾರ್, ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾದದ್ದು. ಹೀಗಾಗಿ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸುತ್ತಿದ್ದೇವೆ. ಮಾಹಿತಿ ನೀಡಲು ಸರ್ಕಾರ ರೆಡಿಯಿದೆ ಎಂದರು.
- Advertisement -