Tuesday, July 1, 2025
spot_imgspot_img
spot_imgspot_img

‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರೆದಿದೆ- ಐಎಎಫ್

- Advertisement -
- Advertisement -

ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರೆದಿದೆ, ಸರಿಯಾದ ಸಮಯದಲ್ಲಿ ಸೂಕ್ತ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಭಾರತೀಯ ವಾಯುಪಡೆ(ಐಎಎಫ್) ಭಾನುವಾರ ತಿಳಿಸಿದೆ.

‘ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಮೇ 7 ರಂದು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ’ ಎಂದು ಐಎಎಫ್ ಮಾಹಿತಿ ನೀಡಿದೆ.’ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸೂಕ್ತ ಸಮಯದಲ್ಲಿ ಹಂಚಿಕೊಳ್ಳಲಾಗುವುದು. ಊಹಾಪೋಹಗಳಿಗೆ ಕಿವಿಗೊಡಬೇಡಿ ಮತ್ತು ಅಸ್ಪಷ್ಟ ಮಾಹಿತಿಯನ್ನು ಪ್ರಸಾರ ಮಾಡುವುದನ್ನು ತಪ್ಪಿಸಿ’ ಎಂದು ಐಎಎಫ್ ಹೇಳಿದೆ.

- Advertisement -

Related news

error: Content is protected !!