ಮಂಗಳೂರು: ದ.ಕ ಡಿಸಿ ಸಿಂಧೂ ಬಿ.ರೂಪೇಶ್ ವರ್ಗಾವಣೆ ಬಗ್ಗೆ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ ಖಾದರ್ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇನೆ ಎಂದು ದುಷ್ಕರ್ಮಿಗಳಿಗೆ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ಕೆಲ ದುಷ್ಕರ್ಮಿಗಳು ಡಿಸಿ ಸಿಂಧೂ ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿದರು. ಆದರೆ ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ವಾಗ್ದಾಳಿ ನಡೆಸಿದ್ರು.
ಇಂತಹ ಸಂದಿಗ್ಧ ಪರಿಸ್ಥಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ..ನ್ಯಾಯ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಕಾನೂನು ಕೈಗೆತ್ತಿಕೊಂಡರೆ,ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ.(1) @CMofKarnataka @BSYBJP @BSBommai
— UT Khadér (@utkhader) July 28, 2020
ಖಾದರ್ ಗೆ ಕೋಟ ಶ್ರೀನಿವಾಸ ಪೂಜಾರಿ ಟಾಂಗ್
Posted by VTV on Wednesday, 29 July 2020
ಖಾದರ್ ಗೆ ಕೋಟ ಶ್ರೀನಿವಾಸ ಪೂಜಾರಿ ಟಾಂಗ್
ಇನ್ನು ಯು.ಟಿ ಖಾದರ್ ಪ್ರತಿಕ್ರಿಯೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ. ಎಂದು ಟಾಂಗ್ ಕೊಟ್ಟಿದ್ದಾರೆ.
ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ.@utkhader https://t.co/wbLoYODrer
— Kota Shrinivas Poojari (@KotasBJP) July 29, 2020