ಮಂಗಳೂರು: ಗೋ ಸಾಗಾಟಗಾರರ ವಿರುದ್ದ ಹಲ್ಲೆ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಧೂ ಬಿ. ರೂಪೇಶ್ ಅವರು ಹೇಳಿಕೆ ನೀಡಿದ ಬಳಿಕ ವಾಟ್ಸಪ್ ಗ್ರೂಪ್ ಒಂದರಲ್ಲಿ ,ಅವರಿಗೆ ಕೊಲೆ ಬೆದರಿಕೆ ಒಡ್ಡಿ ಪೋಸ್ಟ್ ಒಂದು ರವಾನೆಯಾಗಿತ್ತು.
ಮಂಗಳೂರು, ಜು.29: ನಿರ್ಗಮನ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಮಂಗಳೂರಿನ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಗೋ ಸಾಗಾಟಗಾರರ ವಿರುದ್ದ ಹಲ್ಲೆ ನಡೆಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಂಧೂ ಬಿ. ರೂಪೇಶ್ ಅವರು ಹೇಳಿಕೆ ನೀಡಿದ ಬಳಿಕ ವಾಟ್ಸಪ್ ಗ್ರೂಪ್ ಒಂದರಲ್ಲಿ ,ಅವರಿಗೆ ಕೊಲೆ ಬೆದರಿಕೆ ಒಡ್ಡಿ ಪೋಸ್ಟ್ ಒಂದು ರವಾನೆಯಾಗಿತ್ತು . ಈ ಹಿನ್ನಲೆಯಲ್ಲಿ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಈ ಹಿನ್ನಲೆಯಲ್ಲಿ ರಂಜೀತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.