Tuesday, July 21, 2026
spot_imgspot_img
spot_imgspot_img

ರಾಜ್ಯದಲ್ಲಿ ಜೂ.30 ರಿಂದ ʻಎಸ್‌ಐಆರ್‌’ ಅಭಿಯಾನ ಪ್ರಾರಂಭ

- Advertisement -
- Advertisement -

ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು.

ಎಸ್‌ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಎಸ್‌ಐಆರ್ ಗಾಗಿ ಮ್ಯಾಪ್ ಕಾರ್ಯ ಮಾಡಲಾಗಿದೆ. ಎಸ್‌ಐಆರ್‌ಗೆ ಈಗಾಗಲೇ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದರು.

5.55 ಕೋಟಿ ಮತದಾರರನ್ನ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಒಳಪಡಿಸಲಾಗುತ್ತೆ. ಎಸ್‌ಐಆರ್ ಫಾರಂನಲ್ಲಿ ಗಣತಿ ನಮೂನೆಯೇ ಅತ್ಯಂತ ಮುಖ್ಯ. ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ 2 ಸೆಟ್ ಗಣತಿ ನಮೂನೆಗಳನ್ನ ತಲುಪಿಸಲಿದ್ದಾರೆ. ವಿಶೇಷವೆಂದರೆ, ಗಣತಿ ನಮೂನೆಯಲ್ಲಿರುವ ಪ್ರತಿ ಮತದಾರರಿಗೂ ಪ್ರತ್ಯೇಕ ಕ್ಯೂಆರ್ ಕೋಡ್ ಇರಲಿದೆ. ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಯನ್ನ ಮನೆಗೆ ತಂದಾಗ ಸಾರ್ವಜನಿಕರು ಅದರಲ್ಲಿ 1 ಸೆಟ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಧಿಕಾರಿಗಳಿಗೆ ಮರಳಿ ನೀಡಬೇಕು. ಮತ್ತೊಂದು ಸೆಟ್ ಗಣತಿ ನಮೂನೆಯನ್ನು ಭವಿಷ್ಯದ ಸಾಕ್ಷಿಗಾಗಿ ಮತದಾರರೇ ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದು ವಿವರಿಸಿದರು.

2002ರ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ದಾಖಲಾಗಿದೆಯೋ, ಅಂತಹವರ ಹೆಸರುಗಳನ್ನ ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ ವೋಟರ್ ಫೆಸಿಲಿಟಿ ಸೆಂಟರ್ ಓಪನ್ ಮಾಡಲಾಗುತ್ತೆ ಮತದಾರರು ಡೌಟ್ ಇದ್ರೆ ಪರಿಹಾರ ಕಂಡುಕೊಳ್ಳಬಹುದು. ಆಗಸ್ಟ್ 8 ರಂದು ಕರುಡು ಮತದಾರರ ಪಟ್ಟಿ ರಿಲೀಸ್ ಮಾಡಲಾಗುತ್ತೆ ಆಕ್ಷೇಪಣೆಗಳನ್ನ ಸಲ್ಲಿಸಬಹುದು ಎಂದು ಅನ್ಬುಕುಮಾರ್ ಸ್ಪಷ್ಟಪಡಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!