- Advertisement -
- Advertisement -





ಶಿರಸಿ:ವಿಷಪೂರಿತ ಹಾವೊಂದು ಕಚ್ಚಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, ಆತನ ಸಹೋದರಿ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿಯಲ್ಲಿ ಬುಧವಾರ ನಡೆದಿದೆ.
ಮಿಥುನ್ (12) ಹಾವು ಕಡಿತಕ್ಕೆ ಜೀವ ಕಳೆದುಕೊಂಡ ಬಾಲಕ. ಈತನ ತಂಗಿ ದೀಕ್ಷಾ (9) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮಂಗಳವಾರ ರಾತ್ರಿ ಮಕ್ಕಳಿಬ್ಬರು ಪೋಷಕರೊಂದಿಗೆ ಮಲಗಿದ್ದರು ಬೆಳಗಿನ ಜಾವ ಇಬ್ಬರೂ ಮಕ್ಕಳು ದಿಢೀರ್ ಎದ್ದು ವಾಂತಿ ಮಾಡಿಕೊಳ್ಳಲಾರಂಭಿಸಿದ್ದು, ಪೋಷಕರು ಎಚ್ಚರಗೊಂಡು ನೋಡಿದ್ದಾರೆ. ಈ ವೇಳೆ ಮನೆಯಿಂದ ಹಾವೊಂದು ಹೊರಗೆ ಹೋಗುತ್ತಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಪೋಷಕರು ಸ್ಥಳೀಯರ ನೆರವಿನೊಂದಿಗೆ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ತೀವ್ರವಾಗಿ ವಿಷವೇರಿದ್ದರಿಂದ ಮಿಥುನ್ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದು, ದೀಕ್ಷಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








