Tuesday, July 23, 2024
spot_imgspot_img
spot_imgspot_img

ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ ಅಧಿಕಾರಿಗಳು..!

- Advertisement -G L Acharya panikkar
- Advertisement -

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹೊಳೆನರಸೀಪುರದ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕರೆತಂದಿರುವ ಎಸ್‌ಐಡಿ ಅಧಿಕಾರಿಗಳು, ಪ್ರಜ್ವಲ್ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಈ ಮೂಲಕ 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮಿಸಿದ್ದಾರೆ.

ಡಿವೈಎಸ್‌ಪಿ ಸತ್ಯನಾರಾಯಣ ನೇತೃತ್ವದಲ್ಲಿ ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್ ಅವರನ್ನು ಮಾಧ್ಯಮಗಳ ಕ್ಯಾಮೆರಾಗಳಿಗೆ ಕಾಣದಂತೆ ಅವರ ನಿವಾಸಕ್ಕೆ ಕರೆದುಕೊಂಡು ಹೋಗಲಾಗಿದೆ. ಎಸ್‌ಐಟಿ ಅಧಿಕಾರಿಗಳೊಂದಿಗೆ ಎಫ್‌ಎಸ್‌ಎಲ್ ಅಧಿಕಾರಿಗಳು ಕೂಡ ಮಾಹಿತಿ ಕಲೆಹಾಕುತ್ತಿದ್ದಾರೆ.

- Advertisement -

Related news

error: Content is protected !!