Monday, August 10, 2026
spot_imgspot_img
spot_imgspot_img

ಆಶ್ರಮ ಶಾಲೆಯಲ್ಲಿ 6 ವಿದ್ಯಾರ್ಥಿನಿಯರಿಗೆ ಹಾವು ಕಡಿತ – ಮೂವರು ಮೃತ್ಯು; ಓರ್ವ ವಿದ್ಯಾರ್ಥಿನಿ ಗಂಭೀರ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ಬುಡಕಟ್ಟು ಸಮುದಾಯದ ಜನರೇ ಹೆಚ್ಚಿರುವ ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನ ಆಶ್ರಮ ಶಾಲೆಯಲ್ಲಿ ಸೋಮವಾರ (ಇಂದು) ದುರ್ಘಟನೆಯೊಂದು ನಡೆದಿದ್ದು, ಸರ್ಕಾರಿ ಸ್ವಾಮ್ಯದ ಆಶ್ರಮ ಶಾಲೆಯ 6 ಬಾಲಕಿಯರು ಹಾವು ಕಡಿತದಿಂದ(ಶಂಕೆ) ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಯಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದು, ಇತರ ಮೂವರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 14 ವಿದ್ಯಾರ್ಥಿನಿಯರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ.

ಗಡ್ಚಿರೋಲಿ ಜಿಲ್ಲೆಯ ಧನೋಕಾ ತಾಲೂಕಿನ ಆಶ್ರಮ ಶಾಲೆಯ ಹಾಸ್ಟೆಲ್‌ನಲ್ಲಿ ಸುಮಾರು 79 ವಿದ್ಯಾರ್ಥಿನಿಯರು ನೆಲದ ಮೇಲೆ ಮಲಗಿದ್ದರು. ಈ ವೇಳೆ ಬೆಳಗ್ಗಿನ ಜಾವ 2 ಗಂಟೆ ಹೊತ್ತಿನಲ್ಲಿ ಘಟನೆ ನಡೆದಿದೆ. ಗಡ್ಚಿರೋಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಈ ಘಟನೆಯನ್ನು ದೃಢಪಡಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ʻಮೂವರು ಬಾಲಕಿಯರು ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನ ಕೇಳಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯಿಸುತ್ತೇನೆಂದು ತಿಳಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!