Thursday, April 25, 2024
spot_imgspot_img
spot_imgspot_img

ಕೆಲಿಂಜ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ

- Advertisement -G L Acharya panikkar
- Advertisement -

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಲಿಂಜ ಹಾಗೂ ಮಾಮೇಶ್ವರ, ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ, ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ದಿನಾಂಕ 12- 8 -2022 ನೇ ಶುಕ್ರವಾರ ಶ್ರೀ ಉಳ್ಳಾಲ್ತು ದೇವಸ್ಥಾನ ಕೆಲಿಂಜ ಶ್ರೀನಿಕೇತನ ಸಭಾಭವನದಲ್ಲಿ ಜರಗಲಿದೆ.

ಸಭೆಯ ಅಧ್ಯಕ್ಷತೆಯನ್ನು ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ಅಧ್ಯಕ್ಷರಾದ ಪದ್ಮನಾಭ ಗೌಡ ಅಡೈಯಿ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಆಡಳಿತ ಸೇವೆ(ಕೆ.ಎಸ್‌.ಎಫ್‌) ಹಿಂದುಳಿದ ಕಲ್ಯಾಣ ಇಲಾಖೆ ದ.ಕ ಜಿಲ್ಲಾಧಿಕಾರಿ ರಶ್ಮಿ ಎಸ್. ಆರ್ ಮಾಡಲಿದ್ದು, ಧಾರ್ಮಿಕ ಉಪನ್ಯಾಸಕರಾಗಿ ಖ್ಯಾತ ಬರಹಗಾರ್ತಿ ಸಮಾಜ ಸೇವಕಿ ವಿಂದ್ಯಾ ಎಸ್ ರೈ ಮಾಡಲಿದ್ದಾರೆ.

ಅತಿಥಿಗಳಾಗಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ಗ್ರಾಮ ಅಭಿವೃದ್ಧಿ ಯೋಜನೆ ಯೋಜನಾಧಿಕಾರಿ ಚೆನ್ನಪ್ಪ ಗೌಡ, ವಿಟ್ಲ ಶ್ರವಣ ಜ್ಯುವೆಲ್ಲರ್‍ಸ್‌ ನ ಮಾಲಕ ಸದಾಶಿವ ಆಚಾರ್ಯ ಕೈಂತಿಲ, ನಿವೃತ್ತ ಸೈನಿಕ ದಾಸಪ್ಪ ಪೂಜಾರಿ ನೆಕ್ಕಿಲಾರ್, ಲಯನ್ಸ್‌ ಸಂತೋಷ್ ಕುಮಾರ್ ಪೆಲತಡ್ಕ, ವಿಟ್ಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಜಲಜಾಕ್ಷಿ ಬಾಲಪ್ಪ ಗೌಡ , ಮಾಮೇಶ್ವರ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಅಧ್ಯಕ್ಷರಾದ ವೀರಪ್ಪಗೌಡ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಟ್ಲ ಇದರ ಮೇಲ್ವಿಚಾರಕಿ ರೋಹಿಣಿ ನಾಯ್ತೊಟ್ಟು ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!