- Advertisement -
- Advertisement -



ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ, ಸಚಿವ ಕೆಜೆ ಜಾರ್ಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರಿಂದ ವರದಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಎರಡು ವಾರ ವಿಚಾರಣೆ ಮುಂದೂಡಿದೆ. ಈ ಮೂಲಕ ಸಚಿವ ಜಾರ್ಜ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
- Advertisement -








