Friday, April 19, 2024
spot_imgspot_img
spot_imgspot_img

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌, ಕಾಮೆಂಟ್‌; ಐದು ಪ್ರಕರಣ ದಾಖಲು

- Advertisement -G L Acharya panikkar
- Advertisement -

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಸರಣಿ ಹತ್ಯೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಾಗೂ ಕಾಮೆಂಟ್‌ ಮಾಡಿದ ಬಗ್ಗೆ ಐದು ಪ್ರಕರಣ ಮಂಗಳೂರು ನಗರದ ಸೆನ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಗರ ಕಮಿಷನರ್ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದು, ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಪೋಟಗೊಳ್ಳುವ ಸಾಧ್ಯತೆ ಇದೆ ಎಂಬುವುದಾಗಿ ರಾಜ್ಯ ಗುಪ್ತಚರ ದಳ ಮಾಹಿತಿ ಎಂಬುವುದಾಗಿ ಸುಳ್ಳು ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ ಆತಂಕ ಸೃಷ್ಟಿಸಿದ್ದಾರೆ.

ಜೊತೆಗೆ ಪ್ರವೀಣ್‌ ಕೊಲೆಗೆ ಪ್ರತೀಕಾರದ ಕೊಲೆ ಮಾಡಲು ಕರೆ ನೀಡಿದ ಪೋಸ್ಟ್‌, ಅದೇ ರೀತಿ ಫಾಝಿಲ್‌ ಕೊಲೆಗೆ ಪ್ರತೀಕಾರದ ಕೊಲೆ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಗ್ರೂಪ್‌ಗಳಲ್ಲಿ ಹಾಕಿ ಚರ್ಚೆ ನಡೆಸಿದ್ದ ಬಗ್ಗೆಯೂ ಕೇಸು ದಾಖಲಾಗಿದೆ.

ಇನ್ನು ಮಂಗಳೂರಿನಲ್ಲಿ ನಡೆದಿರುವ ಒಂದು ಕೊಲೆಗೆ ಪ್ರತಿಕಾರವಾಗಿ 10 ಕೊಲೆ ಉಳಿದಂತೆ ನಿರ್ದಿಷ್ಟ ಜಾತಿ ಮತ್ತು ಸಮುದಾಯ ಗುರಿಯಾಗಿರಿಸಿಕೊಂಡು ಹತ್ಯೆಗೆ ಕರೆ ನೀಡುವ ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್, ಇನ್ಸ್ಟಾ ಗ್ರಾಮ್, ಟೆಲಿಗ್ರಾಮ್, ಮೆಸೆಂಜರ್ ಸೇರಿದಂತೆ ಇನ್ನಿತರ ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿದೆ.

vtv vitla
- Advertisement -

Related news

error: Content is protected !!