Sunday, July 26, 2026
spot_imgspot_img
spot_imgspot_img

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು, ಮಾ. 29: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಕಮೆಂಟ್‌ಗಳನ್ನು ಹಾಕಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.2026ರ ಜನವರಿಯಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಕಿರಾತ್ (ಕುರ್‌ಆನ್ ಪಠಣ) ಸ್ಪರ್ಧೆಯ ವಿಡಿಯೋವನ್ನು ಉದಯವಾಣಿ ಫೇಸ್‌ಬುಕ್ ಪುಟದಲ್ಲಿ ಪ್ರಸಾರ ಮಾಡಲಾಗುತ್ತಿತ್ತು.

ಈ ವೇಳೆ “ಬಾಲು ರಾಜೇಂದ್ರ” ಎಂಬ ಫೇಸ್‌ಬುಕ್ ಖಾತೆಯಿಂದ ಕೋಮು ಪ್ರಚೋದನಕಾರಿಯಾಗಿ ಕಮೆಂಟ್‌ಗಳನ್ನು ಹಾಕಲಾಗಿದೆ ಎಂಬ ದೂರಿನ ಮೇರೆಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 15/2026ರಡಿ ಪ್ರಕರಣ ದಾಖಲಾಗಿತ್ತು.ಭಾರತೀಯ ನ್ಯಾಯ ಸಂಹಿತೆಯ ಕಲಂ 196 ಹಾಗೂ ಐಟಿ ಕಾಯ್ದೆಯ ಸೆಕ್ಷನ್ 66ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ತನಿಖೆಯಲ್ಲಿ उक्त ಫೇಸ್‌ಬುಕ್ ಖಾತೆಯನ್ನು ಬಳಸುತ್ತಿದ್ದವರು ಚಾಮರಾಜನಗರ ನಿವಾಸಿ ರಾಜೇಂದ್ರ.ಸಿ (48), ತಂದೆ ಚಿಕ್ಕಮಾರಶೆಟ್ಟಿ ಎಂಬುದು ಪತ್ತೆಯಾಗಿದೆ. ಅದರಂತೆ ಮಾ. 28ರಂದು ಆರೋಪಿಯನ್ನು ಬಂಧಿಸಿ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!