- Advertisement -
- Advertisement -






ಮಂಗಳೂರು: 2025ರಲ್ಲಿ ಸಂಭವಿಸಿದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮೂಡಿಸುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ನಡೆಸಿದ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2025 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿತ್ತು.
ತನಿಖೆ ವೇಳೆ “TN-MADDY” ಎಂಬ ಖಾತೆಯಿಂದ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22), ತಂದೆ: ಬಾಲಕೃಷ್ಣ ಎಂದು ಗುರುತಿಸಲಾಗಿದೆ.ದಿನಾಂಕ 25-03-2026 ರಂದು ಕಂಕನಾಡಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ಇದಲ್ಲದೆ, ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ. 95/2025 ರಂತೆ ಮತ್ತೊಂದು ಪ್ರಕರಣವೂ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
- Advertisement -








