Thursday, July 23, 2026
spot_imgspot_img
spot_imgspot_img

ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ..!

- Advertisement -
- Advertisement -

ಬೆಂಗಳೂರು: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ ಬೆಮಲ್ ಲೇಔಟ್‌ನಲ್ಲಿ ನಡೆದಿದೆ.

ಸಾವಿತ್ರಮ್ಮ (72) ಮೃತರು. ಮಗ ವೆಂಕಟೇಶ್(42) ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ ಕೊಲೆ ಮಾಡಿದಾತ.

ಕಳೆದ ನಾಲೈದು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದ ಅವರಿಗೆ ಮಗ ವೆಂಕಟೇಶ್ ಆರೈಕೆ ಮಾಡುತ್ತಿದ್ದನು. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ವೆಂಕಟೇಶ್ ತನ್ನ ತಾಯಿಯನ್ನು ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ತಳ್ಳಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಾವಿತ್ರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ವೆಂಕಟೇಶ್‌ನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ವೇಳೆ ಆರೋಪಿ ವೆಂಕಟೇಶ್, “ತಾಯಿ ಪಡುತ್ತಿದ್ದ ದೈಹಿಕ ನೋವು ಮತ್ತು ನರಕಯಾತನೆಯನ್ನು ನೋಡಲು ಸಾಧ್ಯವಾಗದೆ, ಅವರಿಗೆ ಈ ಅವಸ್ಥೆಯಿಂದ ಮುಕ್ತಿ ನೀಡಲು ಈ ಕೃತ್ಯ ಎಸಗಿದ್ದೇನೆ” ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಆರೋಪಿ ವೆಂಕಟೇಶ್ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!