- Advertisement -
- Advertisement -
ನವದೆಹಲಿ: ಕರೊನಾ ವೈರಸ್ ಹೆಚ್ಚಳ, ಭಾರತ-ಚೀನಾ ಗಡಿ ಸಂಘರ್ಷ, ಆರ್ಥಿಕತೆ ಕುಸಿತ, ಹೀಗೆ ಹತ್ತು ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ ಪ್ರತಿಪಕ್ಷ ಕಾಂಗ್ರೆಸ್.ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಇಂದು ಬೆಳಗ್ಗೆ ತಮ್ಮ ಪಕ್ಷದ ಲೋಕಸಭಾ ಸದಸ್ಯರ ಜತೆ ಸಭೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಕೆಲವು ಮೂಲಗಳು ತಿಳಿಸಿದ್ದಾರೆ.

ಸತತವಾಗಿ ಏರುತ್ತಿರುವ ಇಂಧನ ಬೆಲೆಯ ವಿರುದ್ಧವೂ ಒಂದು ಕಡೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಇಂದು ಬೆಳಗ್ಗೆ ಸೋನಿಯಾ ಗಾಂಧಿಯವರು ಕಾಂಗ್ರೆಸ್ನ ಸಂಸದರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಯಾವ ವಿಚಾರ ಚರ್ಚೆಯಾಗಬಹುದು ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.


- Advertisement -