Tuesday, April 30, 2024
spot_imgspot_img
spot_imgspot_img

ಪುತ್ತೂರು: ಯುವಕರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ; ಡಿವೈಎಸ್ಪಿ ಕಚೇರಿಗೆ ಎಸ್ಪಿ ಮತ್ತು ಎಡಿಷನಲ್ ಎಸ್ಪಿ ಭೇಟಿ ನೀಡಿ ವಿಚಾರಣೆ

- Advertisement -G L Acharya panikkar
- Advertisement -
vtv vitla

ಪುತ್ತೂರು: ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಎಸ್ಪಿ ಅಮಟೆ ವಿಕ್ರಮ್ ಮತ್ತು ಎಡಿಷನಲ್ ಎಸ್ಪಿ ಕುಮಾರ್ ಅವರು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ.

ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ದೌರ್ಜನ್ಯ ಎಸಗಿದ್ದಾರೆಂದು ಆರೋಪಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮತ್ತು ಫೋಟೋ ವೈರಲ್‌ ಆಗುತ್ತಿತ್ತು. ಈ ನಡುವೆ ಗಾಯಗೊಂಡ ಹಿಂದೂ ಯುವಕರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ನಮಗೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದಂತೆ ಹಿಂದೂ ಸಂಘಟನೆ ಮತ್ತು ಸಾರ್ವಜನಿಕ ವಲಯದಿಂದ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ನಿಟ್ಟಿನಲ್ಲಿ ಇದೀಗ ಪೊಲೀಸ್‌ ದೌರ್ಜನ್ಯವನ್ನು ವಿಚಾರಿಸಲು ಎಸ್ಪಿ ಮತ್ತು ಎಡಿಷನಲ್ ಎಸ್ಪಿ ಅವರು ಪುತ್ತೂರು ಪೊಲೀಸ್ ಠಾಣೆ ಮತ್ತು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!