Friday, July 4, 2025
spot_imgspot_img
spot_imgspot_img

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಕೊನೆಯುಸಿರು

- Advertisement -
- Advertisement -

ಚೆನ್ನೈ: 51 ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದಾಗಿ ಎಂಜಿಎಂ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ (74) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು. ತಂದೆಯ ನಿಧನದ ಬಗ್ಗೆ ಅವರ ಪುತ್ರ ಎಸ್ ಪಿ ಚರಣ್ ಅವರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಭಾರತ ಮಾತ್ರವಲ್ಲದೆ ಬಾಲಿವುಡ್ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ ೪೦ ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಸಂಗೀತ ಲೋಕಕ್ಕೆ ಇವರ ಅಗಲಿಕೆ ತುಂಬಾಲಾರದಂತಹ ನಷ್ಟವಾಗಿದೆ.ಎಸ್ ಪಿ ಬಾಲಸುಬ್ರಹ್ಮಣ್ಯಂ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ.ಇವರು ಪತ್ನಿ ಸಾವಿತ್ರಿ ,ಮಗ ಚರಣ್ ಹಾಗು ಮಗಳು ಪಲ್ಲವಿ ಅವರನ್ನು ಅಗಲಿದ್ದಾರೆ.

- Advertisement -

Related news

error: Content is protected !!