Friday, April 19, 2024
spot_imgspot_img
spot_imgspot_img

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ವೈ ಸಂತಾಪ

- Advertisement -G L Acharya panikkar
- Advertisement -

ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು.


ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು. ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ.
ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ.

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!