


ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್ 4 ಮಿಷನ್‌ನ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ 4.30ಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇಳಿದಿದೆ.
ಶುಭಾಂಶು ಶುಕ್ಲಾ ಮತ್ತು ತಂಡವು ಬುಧವಾರ ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ 9 ರಾಕೆಟ್‌ನಿಂದ ನಡೆಸಲ್ಪಡುವ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಹಾರಿತು. ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸಲು ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಸಿಬ್ಬಂದಿ ISSನಲ್ಲಿ 14 ದಿನಗಳನ್ನು ಕಳೆಯಲಿದ್ದಾರೆ.ಭಾರತೀಯ ಶುಭಾಂಶು ಶುಕ್ಲಾ ಸೇರಿ ಫಾಲ್ಕನ್ 9 ರಾಕೆಟ್ನಲ್ಲಿ ನಾಲ್ವರಿಂದ ಬಾಹ್ಯಾಕಾಶಯಾನ ನಡೆದಿದೆ. ಗಗನಯಾನಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದು, 14 ದಿನಗಳ ಕಾಲ ಅವರು ಬಾಹ್ಯಾಕಾಶ ನಿಲ್ದಾಣದಲ್ಲಿರಲಿದ್ದಾರೆ. ಬಾಹ್ಯಾಕಾಶ ನಿಲ್ದಾಣದಲ್ಲಿ ಈ ನಾಲ್ವರು 60 ವೈಜ್ಞಾನಿಕ ಪ್ರಯೋಗ ನಡೆಸಲಿದ್ದಾರೆ. ಬಾಹ್ಯಾಕಾಶದ ಗುರುತ್ವಾಕರ್ಷಣೆ, ಬಯೋಲಾಜಿಕಲ್, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ, ಸಂಶೋಧನೆ, ಭೂಮಿ ವೀಕ್ಷಣೆ ಮಾಡಲಿರುವ ನಾಲ್ವರು ಗಗನಯಾನಿಗಳು ಹೊಸ ದಾಖಲೆ ಸೃಷ್ಟಿಸಲಿದ್ದಾರೆ. ಭಾರತೀಯ ಶುಭಾಂಶು ಶುಕ್ಲಾ, ಪೋಲೆಂಡ್ನ ಸ್ಲವೋಜ್ ಉಝ್ನಾಸ್ಕಿ, ಅಮೆರಿಕ ಪೆಗ್ಗಿ ವಿಟ್ಸನ್, ಹಂಗೇರಿಯಾದ ಟಿಬರ್ ಅಂತರಿಕ್ಷಯಾನ ಕೈಗೊಂಡಿದ್ದಾರೆ.ಆಕ್ಸಿಯಮ್-4 ಮಿಷನ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದ ಶುಭಾಂಶು ಶುಕ್ಲಾ, ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಎರಡನೇ ಭಾರತೀಯ ಮತ್ತು ಖಾಸಗಿ ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ತಲುಪಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆಕ್ಸ್-4 ಮಿಷನ್ ಅಡಿಯಲ್ಲಿ ನಾಲ್ಕು ಗಗನಯಾತ್ರಿಗಳನ್ನು ಹೊತ್ತೊಯ್ದ ಸ್ಪೇಸ್‌ಎಕ್ಸ್ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್, ಇಂದು (ಜೂನ್ 26) ಸಂಜೆ ಯಶಸ್ವಿಯಾಗಿ ಡಾಕ್ ಆಗಿದೆ.