Thursday, August 13, 2026
spot_imgspot_img
spot_imgspot_img

ಮಂಗಳೂರು ನಗರ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ವಿಶೇಷ ಕಾರ್ಯಾಚರಣೆ

- Advertisement -
- Advertisement -

ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವುದು, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ವತಿಯಿಂದ ನಿರಂತರವಾಗಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ No Parking, Footpath Parking, Wrong Parking, Double Parking, Obstruction to Traffic ಸೇರಿದಂತೆ ವಿವಿಧ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026ರಿಂದ ಈವರೆಗೆ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಿ, ರೂ.3,07,600/- ದಂಡವನ್ನು ವಸೂಲಿ ಮಾಡಲಾಗಿದೆ. ಇದರಲ್ಲಿ 1,080 Footpath Parking ಪ್ರಕರಣಗಳು ಸೇರಿವೆ.

ಅದೇ ರೀತಿ, ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್‌ಗಳನ್ನು ಬಳಸಿ ಸಂಚರಿಸುವುದನ್ನು ಹಾಗೂ ಅವುಗಳ ಮೂಲಕ ಅಪರಾಧ ಕೃತ್ಯಗಳನ್ನು ಎಸಗುವುದನ್ನು ತಡೆಗಟ್ಟುವ ಉದ್ದೇಶದಿಂದ ಆ. 4 ರಿಂದ ಆ.12ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ

*258 ದೋಷಪೂರಿತ ನಂಬರ್ ಪ್ಲೇಟ್ ಹೊಂದಿದ್ದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

*ನಂಬರ್ ಪ್ಲೇಟ್ ಅಳವಡಿಸದೆ ಸಂಚರಿಸುತ್ತಿದ್ದ 74 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

*ಒಟ್ಟು 332 ಪ್ರಕರಣಗಳನ್ನು ದಾಖಲಿಸಿ, ರೂ.3,01,000/- ದಂಡವನ್ನು ವಿಧಿಸಲಾಗಿದೆ.

ಪ್ರತಿಯೊಬ್ಬ ವಾಹನ ಮಾಲೀಕರು ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್‌ಗಳನ್ನು ಸ್ಪಷ್ಟವಾಗಿ, ನಿಯಮಾನುಸಾರ ಹಾಗೂ ನಿಗದಿಪಡಿಸಿದ ರೀತಿಯಲ್ಲಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಅಲ್ಲದೆ, ಸರ್ಕಾರ ನಿಗದಿಪಡಿಸಿರುವ HSRP ನಂಬರ್ ಪ್ಲೇಟ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ವತಿಯಿಂದ ಕೈಗೊಳ್ಳಲಾಗುತ್ತಿರುವ ಈ ವಿಶೇಷ ಸಂಚಾರ ಕಾರ್ಯಾಚರಣೆಗಳು ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿವೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತ ಸಂಚಾರಕ್ಕೆ ಸಹಕರಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -

Related news

error: Content is protected !!