Tuesday, July 21, 2026
spot_imgspot_img
spot_imgspot_img

ಮಕರ ಸಂಕ್ರಾಂತಿ ಪ್ರಯುಕ್ತ ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ!

- Advertisement -
- Advertisement -

ಬೆಂಗಳೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಯಾಣಿಕರ ಜನಸಂಖ್ಯೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಮೈಸೂರು ಮತ್ತು ಬೆಳಗಾವಿ ನಡುವೆ ಮೂರು ಟ್ರಿಪ್‌ಗಳ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ಮೈಸೂರು–ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23 ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ–ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ.ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ.ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್ (1), ಎಸಿ 3-ಟೈರ್ (3), ಸ್ಲೀಪರ್ ಕ್ಲಾಸ್ (13), ಸಾಮಾನ್ಯ ದ್ವಿತೀಯ ದರ್ಜೆ (4) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಇರಲಿವೆ.

- Advertisement -

Related news

error: Content is protected !!