Sunday, June 21, 2026
spot_imgspot_img
spot_imgspot_img

*ವಿಟ್ಲ ಅಕ್ರಮವಾಗಿ ಮಧ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳಿಬ್ಬರನ್ನು ಪೊಲೀಸ್ ಠಾಣಾ ವಶಕ್ಕೆ*

- Advertisement -
- Advertisement -

ವಿಟ್ಲ: ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮಧ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳಿಬ್ಬರನ್ನು ವಿಟ್ಲ ಪೊಲೀಸ್ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ವಿಟ್ಲಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಸೆ.೨೨ರಂದು ವಶಕ್ಕೆ ಪಡೆದುಕೊಂಡಿದೆ.


ಸುವರ್ಣ ನಾಯ್ಕ್ ಹಾಗೂ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಬ್ಬರು  ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯದ ಟೆಟ್ರಾ ಪ್ಯಾಕೇಟ್ ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿಟ್ಟುಕೊಂಡು ಸಾಗಟ ಮಾಡುತ್ತಿರುವ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಎಸ್. ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಅವರಿಬ್ಬರನ್ನು ತಡೆದು ನಿಲ್ಲಿಸಿ ಅವರ ಬಳಿ ಇದ್ದ 90 ಎಮ್ ಎಲ್ ಮದ್ಯ ತುಂಬಿದ 96 ಟೆಟ್ರಾ ಪ್ಯಾಕೇಟ್ ಗಳ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. 

ವಶಪಡಿಸಿಕೊಂಡಿರುವ ಮಧ್ಯದ ಒಟ್ಟು ಮೌಲ್ಯ 3360 ರೂಪಾಯಿ ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

- Advertisement -

Related news

error: Content is protected !!