- Advertisement -
- Advertisement -




ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ಯಾವ ರೀತಿಯಲ್ಲಿ ಆರಂಭಿಸಿತ್ತೋ ಇದೀಗ ಇಂದಿನಿಂದ ಆರಂಭವಾಗಿರುವ ಏಕದಿನ ಸರಣಿಯನ್ನೂ ಅದೇ ರೀತಿ ಆರಂಭಿಸಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ನಡೆಯುತ್ತಿರುವ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ 4 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದುಕೊಂಡಿದೆ.
ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿ 47.4 ಓವರ್‌ಗಳಲ್ಲಿ 248 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ 38.4 ಓವರ್‌ಗಳಲ್ಲಿ ಆರು ವಿಕೆಟ್‌ಗಳಿಗೆ 251 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು. ಈಗ, ಟೀಮ್ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಗೆಲುವಿನೊಂದಿಗೆ ಅಜೇಯ ಮುನ್ನಡೆ ಸಾಧಿಸುವ ಗುರಿ ಹೊಂದಿದ್ದು, ಈ ಪಂದ್ಯ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿದೆ.
- Advertisement -








