Friday, July 4, 2025
spot_imgspot_img
spot_imgspot_img

ಚಾಂಪಿಯನ್ಸ್ ಟ್ರೋಫಿ: ಆಸೀಸ್ ಮಣಿಸಿದ ಭಾರತ ಫೈನಲ್ ಗೆ

- Advertisement -
- Advertisement -

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಭಾರತ ಮುಖಾಮುಖಿಯಾಗಿದ್ದವು.

ಎರಡೂ ತಂಡಗಳು ಬಲಿಷ್ಠ ಆಟಗಾರರ ಪಡೆಯನ್ನೇ ಹೊಂದಿದ್ದ ಕಾರಣ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು.ಅದರಂತೆ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ, ಪೂರ್ಣ 50 ಓವರ್‌ಗಳನ್ನು ಆಡಲಾಗದೆ 49.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡರು 264 ರನ್ ಕಲೆಹಾಕಿತು.ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತು. ಈ ಮೂಲಕ ರೋಹಿತ್ ಪಡೆ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿರಿಸಿದೆ.

- Advertisement -

Related news

error: Content is protected !!