- Advertisement -
- Advertisement -



ಮಂಗಳೂರು: ವಾರ್ಷಿಕ ಪೋಲಿಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಡಿ.2 ರಂದು ಬೆಳಿಗ್ಗೆ 8 ಗಂಟೆಗೆ ಡಿಎಆರ್ ಮಂಗಳೂರು ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಒಲಂಪಿಯನ್ ಮತ್ತು ಅರ್ಜುನ ಪ್ರಶಸ್ತಿ ವಿಜೇತ ಎಂ ಆರ್ ಪೂವಮ್ಮ ಇವರು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಗೌರವ ಆಹ್ವಾನಿತರಾಗಿ ಅಂತಾರಾಷ್ಟ್ರೀಯ ಕ್ರೀಡಾಕೂಟ ಮತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪುರಂದರ ಪಿ ಜೆ ಭಾಗವಹಿಸಲಿದ್ದಾರೆ.
ಡಿ. 3 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಪೊಲೀಸ್ ಉಪ ಮಹಾನಿರೀಕ್ಪಕರು ಪಶ್ಚಿಮ ವಲಯ ಅಮಿತ್ ಸಿಂಗ್ ಭಾಗವಹಿಸಲಿದ್ದಾರೆ.
- Advertisement -








