Saturday, September 5, 2026
spot_imgspot_img
spot_imgspot_img

ಸೆ. 21 ರಂದು ಭಾರತ- ಪಾಕಿಸ್ತಾನ ಮುಖಾಮುಖಿ

- Advertisement -
- Advertisement -

ದುಬೈ: ಟಿ20 ಏಷ್ಯಾಕಪ್ ಟೂರ್ನಿಯ ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮುನ್ನವೇ ಭಾರತ-ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ.

ಟೂರ್ನಿಯ ಲೀಗ್ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ.ಈಗಾಗಲೇ ಲೀಗ್ ಸುತ್ತಿನಲ್ಲಿ ಮೂರು ಪಂದ್ಯಗಳನ್ನಾಡಿರುವ ಪಾಕ್ 2ರಲ್ಲಿ ಗೆದ್ದು 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಭಾರತ ಎರಡೂ ಪಂದ್ಯಗಳಲ್ಲಿ ಗೆದ್ದು ಅಗ್ರಸ್ಥಾನದಲ್ಲಿದೆ. ಸೆ.19ರಂದು ಒಮಾನ್ ವಿರುದ್ಧ ಕೊನೆಯ ಲೀಗ್ ಪಂದ್ಯವನ್ನಾಡಲಿದ್ದು, ಭಾನುವಾರ ಸೂಪರ್ ಫೋರ್ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಮುಖಾಮುಖಿಯಾಗಲಿದೆ.ಕಳೆದ ಭಾನುವಾರ ಪಾಕ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ ಈ ಪಂದ್ಯದ ಟಾಸ್ ವೇಳೆ ಹಾಗೂ ಪಂದ್ಯದ ಗೆದ್ದ ಬಳಿಕ ಭಾರತೀಯ ಆಟಗಾರರು ಹ್ಯಾಂಡ್ ಶೇಕ್ ಮಾಡದೆ ಪಾಕಿಸ್ತಾನವನ್ನು ಅವಮಾನಿಸಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡಿತ್ತು.

ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮುನ್ನವೇ ಭಾರತ-ಪಾಕ್ ಸೂಪ‌ರ್ ಫೋರ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಭಾರಿ ಕುತೂಹಲ ಕೆರಳಿಸಿದೆ.ಕಳೆದ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಆಪರೇಷನ್ ಸಿಂದೂರ ಪ್ರತೀಕಾರದ ಬಳಿಕ ಭಾರತ ಪಾಕ್ ಮುಖಾಮುಖಿಯಾಗಿರುವ ಮೊದಲ ಟೂರ್ನಿ ಇದಾಗಿದೆ. ಲೀಗ್‌ ಸುತ್ತಿನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾದಾಗ ಪಂದ್ಯ ರದ್ದುಗೊಳಿಸಬೇಕು, ಶತ್ರು ರಾಷ್ಟ್ರದ ವಿರುದ್ಧ ಭಾರತ ಆಡದಂತೆ ನಿಷೇಧಿಸಬೇಕು ಎಂಬ ಕೂಗು ಕೇಳಿಬಂದಿತ್ತು. ಸೋಷಿಯಲ್ ಮೀಡಿಯಾದಲ್ಲೂ ಬಾಯ್ಕಾಟ್ ಅಭಿಯಾನ ಸದ್ದು ಮಾಡಿತ್ತು. ಇದೆಲ್ಲದರ ಹೊರತಾಗಿಯೂ ಪಂದ್ಯವಾಡಿದ್ದ ಭಾರತ, ಮೈದಾನದಲ್ಲೇ ಪಾಕ್ ಆಟಗಾರರ ಮಾನ ಕಳೆದಿತ್ತು.

- Advertisement -

Related news

error: Content is protected !!