Thursday, September 17, 2026
spot_imgspot_img
spot_imgspot_img

ಕಾಸರಗೋಡು ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯ ಸುರೇಶ್ ಅಧಿಕಾರ ಸ್ವೀಕಾರ

- Advertisement -
- Advertisement -

ಕಾಸರಗೋಡು: ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅವರು ಬುಧವಾರ(ಸೆ.17) ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ನೂತನ ಡಿಸಿಗೆ ಅಧಿಕಾರ ಹಸ್ತಾಂತರಿಸಿದರು.

ಶ್ರೀಧನ್ಯ ಸುರೇಶ್ ಅವರು ಕೇರಳದ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದಿಂದ ಜಿಲ್ಲಾಧಿಕಾರಿ ಹುದ್ದೆ ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಕಾಸರಗೋಡು ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ ಇವರಾಗಿದ್ದಾರೆ.

2018ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 410ನೇ ರ‍್ಯಾಂಕ್ ಗಳಿಸಿದ ಅವರು, ಕೇರಳದ ಬುಡಕಟ್ಟು ಸಮುದಾಯದಿಂದ ಐಎಎಸ್‌ಗೆ ಆಯ್ಕೆಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ವಯನಾಡು ಜಿಲ್ಲೆಯ ಸಾಮಾನ್ಯ ಕುಟುಂಬದಿಂದ ಬಂದಿರುವ ಶ್ರೀಧನ್ಯ ಸುರೇಶ್ ಅವರು ಕಠಿಣ ಪರಿಶ್ರಮದ ಮೂಲಕ ನಾಗರಿಕ ಸೇವೆಗೆ ಪ್ರವೇಶಿಸಿದ್ದಾರೆ. ಈ ಹಿಂದೆ ಆಹಾರ ಸುರಕ್ಷತಾ ಆಯುಕ್ತರು ಹಾಗೂ ನೋಂದಣಿ ಇನ್ಸ್‌ಪೆಕ್ಟರ್ ಜನರಲ್ ಸೇರಿದಂತೆ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಶ್ರೀಧನ್ಯಾ ಸುರೇಶ್‌, ಜಿಲ್ಲೆಯಲ್ಲಿ ಏಮ್ಸ್(AIIMS) ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು ಮತ್ತು ಇದಕ್ಕಾಗಿ ವಿಸ್ತೃತ ಅಧ್ಯಯನ ನಡೆಸಲಾಗುವುದು, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ವರ್ಗದ ಜನರ ಬೆಂಬಲ ಮತ್ತು ಸಹಕಾರ ಅಗತ್ಯ ಎಂದು ಹೇಳಿರುವುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!