Sunday, July 19, 2026
spot_imgspot_img
spot_imgspot_img

ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿ ಪೂರ್ವ ಕಾಲೇಜು, ಅಳಿಕೆ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಕಾರ್ಯಕ್ರಮ – 2025-26 ಉದ್ಘಾಟನೆ

- Advertisement -
- Advertisement -

ರಾಷ್ಟ್ರೀಯ ಸೇವಾ ಯೋಜನೆ (NSS) ಯ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನೆಯು 2.8.2025ನೇ ಶನಿವಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಮಡಿಯಾಲದಲ್ಲಿ ನಡೆಯಿತು.

ವಿದ್ಯಾಸಂಸ್ಥೆಗಳ ಸಂಚಾಲಕ ಎಸ್ ಚಂದ್ರಶೇಖರ ಭಟ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಮಾಜ ಸೇವೆಯ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರು, ಊರಿನ ಮಹನೀಯರು ಶಿಬಿರಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ದಿನಾಂಕ 2.8.2025 ಮತ್ತು 3.8.2025 ಎರಡು ದಿನಗಳು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಶ್ರಮಸೇವೆ ಮಾಡಿ ಎಲ್ಲರ ಶ್ಲಾಘನೆಗೆ ಪಾತ್ರರಾದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕ ಯಾದವ ಎನ್ ಸ್ವಾಗತಿಸಿದರು. ಯೋಜನಾಧಿಕಾರಿ ಹಾಗೂ ಸಮಾಜಶಾಸ್ತ್ರ ಉಪನ್ಯಾಸಕ ಉದಯ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು. ಜೀವಶಾಸ್ತ್ರ ಉಪನ್ಯಾಸಕ ಗಂಗಾಧರ ವಂದಿಸಿದರು.

- Advertisement -

Related news

error: Content is protected !!