Wednesday, July 22, 2026
spot_imgspot_img
spot_imgspot_img

ಶ್ರೀನಗರ: ಸ್ಕಿಡ್ ಆಗಿ ಆಳದ ಕಮರಿಗೆ ಉರುಳಿದ ಸೇನಾ ವಾಹನ; 10 ಮಂದಿ ಸಿಬ್ಬಂದಿ ಸಾವು

- Advertisement -
- Advertisement -

ಶ್ರೀನಗರ: ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ 10 ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸೇನಾ ವಾಹನದಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು. ವಾಹನವು ಎತ್ತರದ ಪೋಸ್ಟ್ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ. ಅಪಘಾತ ಸಂಭವಿಸಿದ ತಕ್ಷಣ ಸೇನೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

ಆರಂಭದಲ್ಲಿ ನಾಲ್ವರು ಯೋಧರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದ್ದು, 13 ಮಂದಿಯನ್ನು ಸಮೀಪದ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ತೀವ್ರವಾಗಿ ಗಾಯಗೊಂಡ ಕೆಲವು ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ವಿಮಾನದಲ್ಲಿ ಕರೆದೊಯ್ಯಲಾಯಿತು. ಬಳಿಕ ಇನ್ನೂ 7 ಸಿಬ್ಬಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!