- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೊರೊನಾ ವಿಚಾರದಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ನಡೆದಿಲ್ಲ ಎಂದು ಕಾಂಗ್ರೆಸ್ ಆರೋಪವನ್ನು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಲ್ಲಗಳೆದಿದ್ದಾರೆ.
ಕೋವಿಡ್ ವಿಚಾರದಲ್ಲಿ 2 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ದಾಖಲೆ ಸಮೇತ ಸಿದ್ದರಾಮಯ್ಯ ಹಾಗೂ ಡಿಕೆಶಿ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಕಳೆದ ಬಾರಿ ಕೂಡ ಆರೋಗ್ಯ ಇಲಾಖೆ ಮೇಲೆ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಅದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಆರೋಗ್ಯ ಇಲಾಖೆ 750 ಕೋಟಿ ರೂ. ಖರ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಾವು ಬರೀ 290 ಕೋಟಿ ರೂ.ಖರ್ಚು ಮಾಡಿದ್ದೇವೆ ಎಂದರು.
ಉಪಕರಣಕ್ಕೆ ಅಧಿಕ ಬೇಡಿಕೆಯಿದ್ದ ಸಂದರ್ಭದಲ್ಲಿ ಬೆಲೆ ಏರುಪೇರಾಗಿರಬಹುದು. ಆದರೆ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಹೇಳಿದರು.
- Advertisement -