- Advertisement -
- Advertisement -



2024-25ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಹಲವೆಡೆ ವಿದ್ಯಾರ್ಥಿಗಳ ಉತ್ತೀರ್ಣ ಶೇಕಡಾವಾರು ತೀರಾ ಕಡಿಮೆಯಾಗಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರವು ಗಂಭೀರ ನೋಟಿಸ್‌ಗಳನ್ನು ಜಾರಿಗೊಳಿಸಿ, ಶಿಕ್ಷಕರು ಮತ್ತು ಶಾಲಾ ಆಡಳಿತದ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.
ಫಲಿತಾಂಶದಲ್ಲಿ ನಿರೀಕ್ಷಿತ ಮಟ್ಟ ಮೀರಿ ಹಿನ್ನಡೆರಾಜ್ಯದ ಹಲವಾರು ಅನುದಾನಿತ ಶಾಲೆಗಳು ಶೇ.60ಕ್ಕಿಂತ ಕಡಿಮೆ ಉತ್ತೀರ್ಣತೆಯ ಫಲಿತಾಂಶ ದಾಖಲಿಸಿರುವುದು ಅಧಿಕಾರಿಗಳಿಗೆ ತೀವ್ರ ಆತಂಕವನ್ನುಂಟುಮಾಡಿದೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸಲು ಸರ್ಕಾರವು ವರ್ಷಾರಂಭದಲ್ಲೇ ಪ್ರತ್ಯೇಕ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದರೂ ಕೂಡ ಫಲಿತಾಂಶ ನಿರಾಶೆ ತಂದಿದೆ. ಶಾಲಾ ಆಡಳಿತಗಳು ಮತ್ತು ವಿಷಯ ಶಿಕ್ಷಕರು ಸರಿಯಾದ ಕೌಶಲ್ಯ ಹಾಗೂ ಮಾರ್ಗದರ್ಶನ ನೀಡದೇ ಇರುವುದು ಈ ಫಲಿತಾಂಶಗಳಿಂದ ಸ್ಪಷ್ಟವಾಗಿದೆ.
- Advertisement -