Friday, April 19, 2024
spot_imgspot_img
spot_imgspot_img

ಎಸ್ಎಸ್ಎಲ್ ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -G L Acharya panikkar
- Advertisement -

ಧಾರವಾಡ: ಈ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜೂನ್ 21ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,ಜೂ.24 ರಂದು ಗಣಿತ, ಸಮಾಜಶಾಸ್ತ್ರ, ಜೂ.26 ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2 ಹಾಗೂ ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಹಾಗೂ ಅರ್ಥಶಾಸ್ತ್ರ.

ಜೂ.28 ರಂದು ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ, ಜೂ.30 ರಂದು ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್, ಜು.2ರಂದು ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ ಹಾಗೂ ಜು.5 ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!