ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯು ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿಗೆ ಕೋರ್ ವಿಷಯ (ವಿಜ್ಞಾನ, ಗಣಿತ, ಸಮಾಜ ವಿಜ್ಞಾನ)ಕ್ಕೆ ಒಂದು ಪರೀಕ್ಷೆಯಿದ್ದು, ಬಹು ಆಯ್ಕೆ ಪ್ರಶ್ನೆಗಳು ಮಾತ್ರ ಇರಲಿದೆ ಹಾಗೂ ಸರಳವಾಗಿರಲಿದೆ. ಪ್ರಥಮ ಭಾಷೆ, ದ್ವಿತೀಯ ಹಾಗೂ ತೃತೀಯ ಭಾಷೆಗೆ ಮತ್ತೊಂದು ಪರೀಕ್ಷೆ ಇರಲಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಸೇರಿ ಒಂದು ಬಹು ಆಯ್ಕೆ ಪ್ರಶ್ನೆ ಪತ್ರಿಕೆ ತಯಾರಿಸಲಾಗುತ್ತದೆ. ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡುತ್ತೇವೆ. ಒಂದು ಕೊಠಡಿಯಲ್ಲಿ 10ರಿಂದ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ n 95 ಮಾಸ್ಕ್ ವಿತರಣೆ ಮಾಡಲಾಗುತ್ತದೆ.

ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶಗಳು ಪ್ರಕಟವಾಗಲಿದ್ದು, ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇದ್ದರೆ ಮತ್ತೊಂದು ಅವಕಾಶ ನೀಡಲಾಗುವುದು. ಈ ಬಾರಿ ದುಪ್ಪಟ್ಟು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಜುಲೈ ಮೂರನೇ ವಾರ sslc ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ಪರೀಕ್ಷೆಯಲ್ಲಿ ಯಾರನ್ನೂ ಕೂಡ ಫೈಲ್ ಮಾಡುವುದಿಲ್ಲ. ಪರೀಕ್ಷಾ ಮೇಲ್ವಿಚಾರಕರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


