- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ನಗರದ ವಿವಿದೆಡೆ ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ. ಹೀಗಾಗಿ ಆಗಸ್ಟ್ ಮೊದಲ ವಾರದಲ್ಲಿ 8.5 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಲಿತಾಂಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ಸುರಕ್ಷಿತವಾಗಿ ಮೌಲ್ಯಮಾಪನ ನಡೆಯುತ್ತಿದೆ. ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ತಿಳಿಸಿದರು.

- Advertisement -