Monday, May 20, 2024
spot_imgspot_img
spot_imgspot_img

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ

- Advertisement -G L Acharya panikkar
- Advertisement -

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ನಂಬರ್‌ಗೆ ಫಲಿತಾಂಶ ವಿವರ ಕಳುಹಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾದ ಎನ್‌. ಮಂಜೂಷಿ ಹೇಳಿದ್ದಾರೆ.

ಈ ಬಾರಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಶಿವಮೊಗ್ಗ ಮೂರನೇ ಸ್ಥಾನದಲ್ಲಿ ಮತ್ತು 4ನೇ ಸ್ಥಾನದಲ್ಲಿ ಕೊಡುಗು ಜಿಲ್ಲೆಯಿದೆ. ದಕ್ಷಿಣ ಕನ್ನಡ ಜಿಲ್ಲೆ 92.12%, ಶಿವಮೊಗ್ಗ ಜಿಲ್ಲೆ 88.67%, ಕೊಡಗು ಜಿಲ್ಲೆ 88.67% ಪರ್ಸಂಟೇಜ್‌ ಪಡೆದಿದೆ. 625ಕ್ಕೆ 625 ಅಂಕ ಪಡೆದ ಅಂಕಿತ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

- Advertisement -

Related news

error: Content is protected !!