ರಾಜ್ಯಾದ್ಯಂತ ಜೂ. 25ರಿಂದ ಜು. 4ರ ವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸುರಕ್ಷಿತವಾಗಿ ಬರೆಯಲು ಬೇಕಾದ ಎಲ್ಲ ಅಗತ್ಯ ಸಿದ್ಧತೆಗಳನ್ನು ಸರಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಳ್ಳಲಾ ಗಿದೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಯ ಸಂಪೂರ್ಣ ಜವಾಬ್ದಾರಿ ಸರಕಾರದ್ದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಸೋಮವಾರ ನಡೆದ ಎಸೆಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಕ್ರಮಗಳ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಯಾರಲ್ಲೂ ಆಂತಕ ಬೇಡ. ಪರೀಕ್ಷಾ ಕೇಂದ್ರಕ್ಕೆ ಬರಲು ಅವಶ್ಯವಿದ್ದಲ್ಲಿ ಒಬ್ಬನೇ ವಿದ್ಯಾರ್ಥಿಗಾಗಿಯೂ ಬಸ್ಸಿನ ವ್ಯವಸ್ಥೆ ಮಾಡಲೂ ಸರಕಾರ ಸಿದ್ಧವಾಗಿದೆ ಎಂದರು.
ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗ ಳಿದ್ದು ಹೆಚ್ಚುವರಿಯಾಗಿ 19 ಕೇಂದ್ರಗಳನ್ನು ಗುರುತಿಸಲಾಗಿದೆ. 1,585 ಕೊಠಡಿಗಳಲ್ಲಿ 30,835 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲು ಎಲ್ಲ ಸಿದ್ಧತೆ ಆಗಿದೆ. ಈ ಜಿಲ್ಲೆಯಲ್ಲಿ ನೋಂದಾಯಿಸಿ ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ 1318 ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ ಎಂದರು.