Thursday, June 18, 2026
spot_imgspot_img
spot_imgspot_img

ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಬಗ್ಗೆ ಎಸ್‌. ಸುರೇಶ್ ಕುಮಾರ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ‘ಕೋವಿಡ್ ತೀವ್ರ‌ವಾಗಿ ಹರಡುತ್ತಿರುವ ಕಾರಣ, ಈಗಾಗಲೇ ಮುಂದೂಡಲಾಗಿರುವ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ‌. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು.

ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದೂ ಅವರು ಮನವಿ ಮಾಡಿದ್ದಾರೆ.

driving
- Advertisement -

Related news

error: Content is protected !!