- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೊರೊನಾ ಸೋಂಕು ಹಿನ್ನಲೆ ಸಿಲಿಕಾನ್ ಸಿಟಿಯಲ್ಲಿ ಲಾಕ್ ಡೌನ್ ಘೋಷಣೆಯಾಗಿರುವ ಕಾರಣ ಬೆಂಗಳೂರು ನಗರ ಹಾಗೂ ಬೆ.ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನವನ್ನು ಮುಂದೂಡಲಾಗಿದೆ.
ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಎಸ್ ಎಸ್ ಎಲ್ ಸಿ ಮೌಲ್ಯಮಾಪನವು ಜುಲೈ 13 ರಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭವಾಗಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಹೇಳಿದರು.
- Advertisement -