Saturday, February 8, 2025
spot_imgspot_img
spot_imgspot_img

*ಇಂದು SSLC ರಿಸಲ್ಟ್: ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಸುರೇಶ್ ಕುಮಾರ್*  

- Advertisement -
- Advertisement -

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆತ್ಮಸ್ಥೈರ್ಯ ತುಂಬಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗುತ್ತದೆ. ತಮ್ಮ ಮೊಬೈಲ್ ಗೆ ಫಲಿತಾಂಶ ಬರುತ್ತದೆ ಎಂದು ತಿಳಿಸಿದ್ದಾರೆ.

ಕೊರೊನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ. ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬಿ ಎಂದು ಪೋಷಕರಿಗೆ ಕಿವಿ ಮಾತು ಹೇಳಿದ್ದಾರೆ.

ನಿಮ್ಮ ಮಕ್ಕಳನ್ನು ಬೇರೆಯವರೊಂದಿಗೆ ಹೋಲಿಕೆ  ಮಾಡಿ ನೋವಾಗುವಂತೆ ಮಾಡಬೇಡಿ. ಅವರು ಯಾವ ಕೋರ್ಸ್ ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ. ಮುಂದೆ ಚೆನ್ನಾಗಿ  ಓದಲು ಹೇಳಿ. ಹಾಗೂ ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ. ಮಗು ಮನೆಯ ಬೆಳಕು. ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಶುಭಕೋರಿದ್ದಾರೆ.

https://m.facebook.com/story.php?story_fbid=3713643031996348&id=100000520624203
- Advertisement -

Related news

error: Content is protected !!