Wednesday, May 8, 2024
spot_imgspot_img
spot_imgspot_img

ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ – ಆರೋಪಿ ಅಂದರ್.!

- Advertisement -G L Acharya panikkar
- Advertisement -

vtv vitla
vtv vitla

ಉಪ್ಪಿನಂಗಡಿ : ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಸಹಜ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೌಢ ಶಾಲೆಯೊಂದರಲ್ಲಿ ಎಸೆಸೆಲ್ಸಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಎಂಬಾತ ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

vtv vitla
- Advertisement -

Related news

error: Content is protected !!