ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 6 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ರಾಜ್ಯದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಅನುಷ್ ಎ.ಎಲ್ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಎನ್ನಿಸಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸನ್ನಿಧಿ ಮಹಾಬಲೇಶ್ವರ ಹೆಗಡೆ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ನಾಗಸಂದ್ರದ ಸ್ಕೋನ್ ಸ್ಟಾಟ್ ಸೈಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿ ಚಿರಾಯು ಕೆ.ಎಸ್ 625ಕ್ಕೆ 625 ಅಂಕ ಪಡೆದು ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಇನ್ನು ಳಿದಂತೆ ಸದಾಶಿವನಗರದ ಪೂರ್ಣಪ್ರಜ್ಞ ಎಜುಕೇಶನ್ ಸೊಸೈಟಿ ವಿದ್ಯಾರ್ಥಿ ನಿಖಿಲೇಶ್ ಎನ್ ಮಾರಳ್ಳಿ, 625ಕ್ಕೆ 625 ಅಂಕ ಗಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀ ಸತ್ಯ ಸಾಯಿ ಸರಸ್ವತಿ ಇಂಗ್ಲಿಷ್ ಮೀಡಿಯಮ್ ವಿದ್ಯಾರ್ಥಿ ಧೀರಜ್ ರೆಡ್ಡಿ. ಎಂ.ಪಿ 625ಕ್ಕೆ 625 ಅಂಕ ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸೇಂಟ್ ಜೋಸೆಫ್ ಕಾನ್ವೆಂಟ್ ಗರ್ಲ್ಸ್ ಹೈ ಸ್ಕೂಲ್ ವಿದ್ಯಾರ್ಥಿನಿ ತನ್ಮಯಿ ಐ.ಪಿ 625ಕ್ಕೆ 625 ಅಂಕ ಗಳಿಸಿದ್ದಾರೆ.