Friday, July 31, 2026
spot_imgspot_img
spot_imgspot_img

SSLC ಪರೀಕ್ಷೆ ಕೊಠಡಿಯಲ್ಲಿ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ…!

- Advertisement -
- Advertisement -

ಹಾವೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳು ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿಗೆ ಪರೀಕ್ಷೆ ಕೊಠಡಿಯಲ್ಲಿ ‌ಮುತ್ತುಕೊಟ್ಟ ಶಿಕ್ಷಕಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಹಾವೇರಿಯ ಶಿಕ್ಷಕ ಪರಮೇಶ ಐರಣಿ( 45) ಎಂಬಾತನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ ಪರಮೇಶ, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪರೀಕ್ಷೆ ಆರಂಭವಾದ ದಿನದಿಂದ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ, ನಿನಗೆ ಜಾಸ್ತಿ‌ ಅಂಕ ಕೊಡ್ತೇನೆಂದು ಕಿಸ್ಸಿಂಗ್‌ ಮಾಡಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!